ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಭಾರತ

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ಮುತ್ತಿಗೆ ಹಾಕಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ಮೇಲೆ FIR ದಾಖಲು..!

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರತಿಪಕ್ಷಗಳ ಹಲವು ಸಂಸದರು ಮತ್ತು ನೂರಾರು ಬೆಂಬಲಿಗರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ರಾಹುಲ್ ಗಾಂಧಿ, ಪ್ರ...

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!
ಹಂಚಿಕೊಳ್ಳಿ:

ನವದೆಹಲಿ: ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು, ವಿರೋಧ ಪಕ್ಷಗಳ ಹಲವು ಸಂಸದರು ಮತ್ತು ನೂರಾರು ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅವರ ಬೆಂಬಲಿಗರು ಮತ್ತು ಅವರೊಂದಿಗೆ ಇದ್ದ ಇತರೆ ಸಂಸದರು, ಅಗತ್ಯ ಅನುಮತಿಯನ್ನು ಪಡೆಯದೆಯೇ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಸರ್ಕಾರಿ ಸ್ವಾಮ್ಯದ ಆಕಾಶವಾಣಿ ಭವನದ ಆವರಣದೊಳಗೆ ಬಲವಂತವಾಗಿ ಮತ್ತು ಅನಧಿಕೃತವಾಗಿ ನುಗ್ಗಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಈ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರದಂದು, ಚುನಾವಣಾ ಆಯೋಗದ ಕಚೇರಿಯ ಕಡೆಗೆ ಇಂಡಿಯಾ ಮೈತ್ರಿಕೂಟ ನಡೆಸುತ್ತಿದ್ದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ, ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚಿನ ಅವಧಿಯವರೆಗೆ ಧರಣಿ ಮಾಡಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ 260 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ‘ಮತ ಕಳ್ಳತನ’ದ ಆರೋಪವನ್ನೂ ಮಾಡಿದ್ದರು.

ದೆಹಲಿ ಪೊಲೀಸರ ಮಾಹಿತಿ ಪ್ರಕಾರ, ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮಂಗಳವಾರ ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ಮೆರವಣಿಗೆ ನಡೆಸಲು ತೀರ್ಮಾನಿಸಿದ್ದವು. ಆದರೆ, ಈ ಪಾದಯಾತ್ರೆಗೆ ಅನುಮತಿ ಕೋರಿ ನವದೆಹಲಿಯ ಪೊಲೀಸ್ ಉಪ ಆಯುಕ್ತರ ಕಚೇರಿಗೆ ಯಾವುದೇ ಮನವಿಯನ್ನು ಸಲ್ಲಿಸಿರಲಿಲ್ಲ. ಆ ಕಾರಣದಿಂದ, ಈ ಮೆರವಣಿಗೆಗೆ ಯಾವುದೇ ಅನುಮತಿ ನೀಡಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಹಂಚಿಕೊಳ್ಳಿ: