ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಕರ್ನಾಟಕ

ನೋಡಲ್ ಅಧಿಕಾರಗಳನ್ನು ನೇಮಿಸಿ, ಬರವನ್ನು ಸಮರ್ಪಕವಾಗಿ ಎದುರಿಸಿ ಎಂದು ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ

ರಾಮನಗರ: ಜಿಲ್ಲೆಯ ಐದು ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದ್ದು, ಬರ (Droght) ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲಾ ತಾಲೂಕುಗಳಲ್ಲೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಪೌರಾಡಳಿತ ಸಚಿವ ಹೆಚ್.ಸಿ....

· ರಾಮನಗರ
ಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ
ಹಂಚಿಕೊಳ್ಳಿ:

ರಾಮನಗರ: ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಬರ (Droght) ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿಯೊಂದು ತಾಲೂಕಿಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ (HC Balakrishna) ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೇಮಕವಾಗುವ ನೋಡಲ್ ಅಧಿಕಾರಿಗಳು ಪ್ರತಿ ಶುಕ್ರವಾರ ಆಯಾ ತಾಲೂಕುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಂಡಿರುವ ಕ್ರಮಗಳು ಹಾಗೂ ಪರಿಹಾರ ಕಾರ್ಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಶೀಲನೆ ನಡೆಸಬೇಕು. ನಂತರ ಆ ವರದಿಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು, ತದನಂತರ ತಮಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಆರ್ಕೆಸ್ಟ್ರಾ ನೋಡ್ತಿದ್ದ ವೇಳೆ ದುರಂತ – ಲೈಟ್ ಕಂಬ ಬಿದ್ದು ಒರ್ವ ಸಾವು, ಮತ್ತೋರ್ವ ಗಂಭೀರ

ಅಧಿಕಾರಿಗಳ ಮಟ್ಟದಲ್ಲಿ ಪರಿಹರಿಸಲು ಸಾಧ್ಯವಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಒಂದು ವೇಳೆ ತಮ್ಮ ವ್ಯಾಪ್ತಿಯನ್ನು ಮೀರಿದ ಸಮಸ್ಯೆಗಳಿದ್ದರೆ ತಮ್ಮ ಗಮನಕ್ಕೆ ತಂದರೆ, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಬರಗಾಲದ ಸಂದರ್ಭದಲ್ಲಿ ಬೆಳೆ ವಿಮೆ ರೈತರಿಗೆ ಹೆಚ್ಚಿನ ನೆರವಾಗಲಿದ್ದು, ರೈತರಿಗೆ ವಿಮಾ ಪರಿಹಾರದ ಹಣ ಸಕಾಲದಲ್ಲಿ ಸಿಗುವಂತಾಗಬೇಕು. ಈ ವಿಷಯವಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಅವರು ನುಡಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ – ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ

ಜಿಲ್ಲೆಯಲ್ಲಿ ಈ ಬಾರಿ 18,000ಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ ಮಾಗಡಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 9,000ಕ್ಕೂ ಅಧಿಕ ರೈತರು ನೋಂದಾಯಿಸಿಕೊಂಡಿದ್ದಾರೆ. ಬರಗಾಲದಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ಪರಿಹಾರದ ಹಣ ಸಕಾಲದಲ್ಲಿ ದೊರೆತರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೇಪಿತರಾಗುತ್ತಾರೆ. ಈ ನಿಟ್ಟಿನಲ್ಲಿ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದರೆ ಬೆಳೆ ವಿಮೆ ಮಾಡಿಸುವವರ ಸಂಖ್ಯೆ ಹೆಚ್ಚಾಗುತ್ತದೆ. ಇದರಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಸಚಿವ ಸಂಪುಟ ಸಭೆ, ಕೃಷಿ ಇಲಾಖೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳಿದ್ದರೆ ಸಮಗ್ರ ತನಿಖೆ ನಡೆಸಿ: ಸಿ.ಟಿ ರವಿ

ಹಂಚಿಕೊಳ್ಳಿ: