ಎಕ್ಸ್‌ಪ್ರೆಸ್ ಹೈವೆಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ದಾರುಣ ಸಾವು!
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ...

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆಯಲ್ಲಿ ಆಕೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಸಮೀಪ ವರದಿಯಾಗಿದೆ.
ಕುಂಬಳಗೂಡು ಹತ್ತಿರದ ರಾಮೋಹಳ್ಳಿ ಗ್ರಾಮದ ನಿವಾಸಿ ಭೂಮಿಕಾ (22) ಮೃತಪಟ್ಟ ಯುವತಿ. ಮೃತ ಭೂಮಿಕಾ ನಿನ್ನೆ ತಮ್ಮ ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಆಗಮಿಸಿದ್ದರು. ತಡರಾತ್ರಿ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆಯನ್ನು ದಾಟಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ, ಅತಿ ವೇಗವಾಗಿ ಬಂದ ಕಾರೊಂದು ಆಕೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆ ಕುರಿತಂತೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




