ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಕರ್ನಾಟಕ

ಕಲಬುರಗಿಯಲ್ಲಿ ತರಬೇತಿ ವಿಮಾನಕ್ಕೆ ತುರ್ತಾಗಿ ಇಳಿಯುವ ಸ್ಥಿತಿ – ತೊಗರಿ ಹೊಲದಲ್ಲೇ ಲ್ಯಾಂಡಿಂಗ್‌

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಆಗಿರುವ ಘಟನೆ ಕಲಬುರಗಿ (Kalaburagi) ವಿಮಾನ ನಿಲ್ದಾಣದ ಸಮೀಪ ನಡೆದಿದೆ. ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯ...

· ಕಲಬುರಗಿ
ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ – ತೊಗರಿ ಹೊಲದಲ್ಲಿ ಲ್ಯಾಂಡಿಂಗ್‌
ಹಂಚಿಕೊಳ್ಳಿ:

ಕಲಬುರಗಿ (Kalaburagi) ವಿಮಾನ ನಿಲ್ದಾಣದ ಹತ್ತಿರ ತಾಂತ್ರಿಕ ಸಮಸ್ಯೆಯಿಂದ ತರಬೇತಿ ವಿಮಾನವೊಂದು ರೈತರ ಕೃಷಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಸಂಭವಿಸಿದೆ.

ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ತಾಂತ್ರಿಕ ದೋಷ ಕಂಡುಬಂದ ತಕ್ಷಣ ಸಿಬ್ಬಂದಿ ತಮ್ಮ ಸಮಯಪ್ರಜ್ಞೆಯನ್ನು ಬಳಸಿ ವಿಮಾನವನ್ನು ಜಮೀನಿನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಇದನ್ನೂ ಓದಿ: ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ, ಇಬ್ಬರಿಗೆ ಗಾಯ

ಈ ಘಟನೆಯು ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ತಾಂತ್ರಿಕ ದೋಷವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಹಂಚಿಕೊಳ್ಳಿ: