ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಕರ್ನಾಟಕ

KRS ಬೃಂದಾವನದಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕದಲ್ಲಿ ಬದಲಾವಣೆ!

– ಅಕ್ಟೋಬರ್ 16ರಿಂದ 21ರವರೆಗೆ ಆಯೋಜನೆ ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ (KRS) ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನ ಅನಿವಾರ್ಯ ಕಾರಣಗಳಿ...

· ಮಂಡ್ಯ
KRS ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕ ಬದಲಾವಣೆ
ಹಂಚಿಕೊಳ್ಳಿ:

– ಅಕ್ಟೋಬರ್ 16ರಿಂದ 21ರವರೆಗೆ ಆಯೋಜನೆ

ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ (KRS) ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನ ಅನಿವಾರ್ಯ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ (N Cheluvarayaswamy) ಅವರು ತಿಳಿಸಿದ್ದಾರೆ.

ಈ ಮೊದಲು ಅಕ್ಟೋಬರ್ 11 ರಿಂದ 16ರ ವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ (Cauvery Aarti) ಕಾರ್ಯಕ್ರಮವನ್ನ ಇದೀಗ ಅಕ್ಟೋಬರ್ 16 ರಿಂದ 21 ರವರೆಗೆ ಕೆಆರ್‌ಎಸ್ ಬೃಂದಾವನ ಆವರಣದಲ್ಲಿ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯುವ ಸ್ಥಳವಾದ ಕೆಆರ್‌ಎಸ್ ಬೃಂದಾವನದಲ್ಲಿ ನಡೆಯಲಿರುವ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತಾದಿಗಳು ಬದಲಾದ ದಿನಾಂಕ ಗಮನಿಸಿ, ಅಕ್ಟೋಬರ್ 16 ರಿಂದ 21 ರವರೆಗೆ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸುವಂತೆ ಸಚಿವರು ಕೋರಿದ್ದಾರೆ.

ಹಂಚಿಕೊಳ್ಳಿ: