ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಕರ್ನಾಟಕ

ಲಾರಿಗೆ ಕಾರು ಗುದ್ದಿ ಭೀಕರ ಅಪಘಾತ – ಮೂವರ ಸಾವು, ಇಬ್ಬರಿಗೆ ಗಾಯ!

ಚಿತ್ರದುರ್ಗ: ಲಾರಿಗೆ (Lorry) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್...

· ಚಿತ್ರದುರ್ಗ
ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ, ಇಬ್ಬರಿಗೆ ಗಾಯ
ಹಂಚಿಕೊಳ್ಳಿ:

ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ ಸಮೀಪ ಲಾರಿಗೆ (Lorry) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22) ಮತ್ತು ಮಂಜುನಾಥ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸವರಾಜ್ (21) ಎಂಬಾತ ಹಿರಿಯೂರು ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಾರಿನಲ್ಲಿದ್ದ ಇತರ ಇಬ್ಬರು ಗಾಯಗೊಂಡಿದ್ದು, ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಉಡುಪಿ: 18 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್‌

ಲಾರಿಯ ಟೈರ್ ಸ್ಫೋಟಗೊಂಡು ಅನಿರೀಕ್ಷಿತವಾಗಿ ಎಡಕ್ಕೆ ತಿರುಗಿದ ಕಾರಣ, ಹಿಂದೆ ಬರುತ್ತಿದ್ದ ಸ್ವಿಫ್ಟ್ ಕಾರು ಲಾರಿಗೆ ಅಪ್ಪಳಿಸಿದ್ದರಿಂದ ಈ ಅವಘಡ ಉಂಟಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇಂದ್ರದಿಂದ 2 ಮಹತ್ವದ ನಿರ್ಧಾರ; ಸಾರಿಗೆಗೆ ಹೊಸ ಪ್ರಾಧಿಕಾರ, ಸಣ್ಣ ಉದ್ಯಮಗಳಿಗೆ 10 ಸಾವಿರ ಕೋಟಿ ರೂ. ನಿಧಿ

ಹಂಚಿಕೊಳ್ಳಿ: