ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಕರ್ನಾಟಕ

ಮೈಸೂರು ಪ್ರಸಿದ್ಧ ದಸರಾ ಉದ್ಘಾಟನೆ ಆಹ್ವಾನ ಸ್ವೀಕರಿಸಿದ ಗವಿಸಿದ್ದೇಶ್ವರ ಶ್ರೀಗಳು

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿರಸ್ಕೃತಿಸಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು ಗವಿಮಠಕ್ಕೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು

ಸಂಪಾದಕೀಯ ಡೆಸ್ಕ್· 1 ನಿಮಿಷ ಓದು· ಮೈಸೂರು
ಹಂಚಿಕೊಳ್ಳಿ:

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿರಸ್ಕೃತಿಸಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು ಗವಿಮಠಕ್ಕೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಅಕ್ಟೋಬರ್ 11ರಂದು ದಸರಾಗೆ ಚಾಲನೆ ದೊರೆಯಲಿದ್ದು, ಅ.21ರಂದು ವಿಜಯದಶಮಿ ಜಂಬೂಸವಾರಿ ಜರುಗಲಿದೆ. ಇನ್ನು ದಸರಾ ಉದ್ಘಾಟನೆ ಅಹ್ವಾನವನ್ನು ಗವಿಸಿದ್ಧೇಶ್ವರ ಸ್ವಾಮೀಜಿ ಸಂತೋಷದಿಂದ ಸ್ವೀಕರಿಸಿದರು ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅಧಿಕೃತ ಆಹ್ವಾನ ನೀಡಲಾಗಿದ್ದು ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ ಇಂದು ಅಧಿಕೃತವಾಗಿ ಆಹ್ವಾನಿಸಿದರು. ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕವಾಗಿರುವ ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹಂಚಿಕೊಳ್ಳಿ: