ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಸುದ್ದಿ

ಬೀದರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿಗಾಹುತಿಯಾದ ಮನೆ!

ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಧಗಧಗ ಹೊತ್ತಿ ಉರಿದ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ (fire Accident) ಗ್ರಾಮದಲ್ಲಿ ನಡೆದಿದೆ. ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್...

· ಬೀದರ್
ಬೀದರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗ ಹೊತ್ತಿ ಉರಿದ ಮನೆ
ಹಂಚಿಕೊಳ್ಳಿ:

ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ.

ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅಗ್ನಿ ಅವಘಡ (fire Accident) ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದ ಪರಿಣಾಮ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮನೆಯ ಹಾಲ್ ಮತ್ತು ಕಿಚನ್ ರೂಂಗೆ ಬೆಂಕಿ ಹಬ್ಬಿದ ಕಾರಣ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಹೋಗಿವೆ. ಮನೆಯಲ್ಲಿದ್ದ ದಿನಸಿ ಸಾಮಗ್ರಿಗಳು, ಫ್ರಿಡ್ಜ್ ಮತ್ತು ಇತರೆ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿವೆ.

ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸಮಯಪ್ರಜ್ಞೆಯಿಂದ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅದೃಷ್ಟವಶಾತ್ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಿಟಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಂಧಿಸಿ ಜೈಲಿಗಟ್ಟಿದರೆ ಸಮಸ್ಯೆಗೆ ಪರಿಹಾರ ಸಿಗಲ್ಲ- ಅಪರಾಧಿಗಳಿಗೆ ಭಯ ಹುಟ್ಟಿಸಿ: ದೆಹಲಿ ಪೊಲೀಸರಿಗೆ ಸುಪ್ರೀಂ ಸೂಚನೆ

ಹಂಚಿಕೊಳ್ಳಿ: