ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಸುದ್ದಿ

ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ. ಪ್ರಜ್ವಲ್ ರೇವಣ್ಣ ಸೇರಿದಂತೆ 9 ಮಂದಿಯನ್ನು ಬೇರೆ ಬ...

· ಬೆಂಗಳೂರು ನಗರ
ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್
ಹಂಚಿಕೊಳ್ಳಿ:

ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ಪ್ರಜ್ವಲ್ ರೇವಣ್ಣ ಸೇರಿದಂತೆ 9 ಮಂದಿಯನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. 9 ಮಂದಿಯನ್ನ ಶಿಫ್ಟ್ ಮಾಡಲು ಸಿಟಿ ಪೊಲೀಸರು ಸೂಚಿಸಿದ್ದರು.

ಅಪರಾಧಿ ಶಂಕರ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಡಿಐಜಿ ಸೋಮಶೇಖರ್ ಜೊತೆ ಸೇರಿ ಫೇಕ್ ದಾಖಲಾತಿ ಸೃಷ್ಟಿಸಿ ಬಿಡುಗಡೆಗೊಳಿಸಿದ್ದ. ಕೋಕಾ ಆಕ್ಟ್ ಅಡಿಯಲ್ಲಿ ಬಂಧನವಾಗಿರುವ ಆರೋಪಿಗಳನ್ನ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ.

ಪ್ರಜ್ವಲ್ ರೇವಣ್ಣ ಇತ್ತೀಚೆಗೆ ಜೈಲಿನಲ್ಲಿ ಮೊಬೈಲ್ ಬಳಸಿದ ಆರೋಪ ಎದುರಿಸುತ್ತಿದ್ದರು. ಇದರ ಬೆನ್ನಲ್ಲೇ ಈಗ ಪರಪ್ಪನ ಅಗ್ರಹಾರದಿಂದ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಹಂಚಿಕೊಳ್ಳಿ: