ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಸುದ್ದಿ

ಬೆಂಗ್ಳೂರಿಂದ ಸಾಗರಕ್ಕೆ ಹೊರಟಿದ್ದ ಸ್ಲೀಪರ್ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ!

ಶಿವಮೊಗ್ಗ: ಬೆಂಗಳೂರಿಂದ (Bengaluru) ಸಾಗರಕ್ಕೆ (Sagar) ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ (Fire Accident) ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು – ಹೊನ್ನಾವರ NH-2...

· ಶಿವಮೊಗ್ಗ
ಬೆಂಗ್ಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ – ತಪ್ಪಿದ ಭಾರೀ ಅನಾಹುತ
ಹಂಚಿಕೊಳ್ಳಿ:

ಶಿವಮೊಗ್ಗ: ಬೆಂಗಳೂರಿಂದ (Bengaluru) ಸಾಗರಕ್ಕೆ (Sagar) ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ (Fire Accident) ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು – ಹೊನ್ನಾವರ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿತ್ತು. ಈ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬಸ್‌ ಸುಟ್ಟು ಕರಕಲಾಗಿದೆ.‌

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಚಾಲಕ, ಹಾಗೂ ಕ್ಲೀನರ್‌ ತಕ್ಷಣ ಕೆಳಗಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಾಗರಕ್ಕೆ ತೆರಳುತ್ತಿದ್ದರು. ಹೆಚ್ಚಿನ ಪ್ರಯಾಣಿಕರಿದ್ದಿದ್ದರೆ ಅನಾಹುತ ಆಗುವ ಸಾಧ್ಯತೆ ಇತ್ತು.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಆನಂದಪುರ ಠಾಣೆ ಪಿಎಸ್‌ಐ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಂಚಿಕೊಳ್ಳಿ: