ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಸುದ್ದಿ

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ NSS ಸ್ವಯಂಸೇವಕರಿಂದ ಸ್ವಚ್ಛತಾ ಅಭಿಯಾನ!

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ ಎಸ್ ಎಸ್ ಸ್ವಯಂಸೇವಕರು 72ನೇ ವನ್ಯಜೀವ ಸಪ್ತಾಹದ ಅಂಗವಾಗಿ ಸೋಮೇಶ್ವರ ವನ್ಯಜೀವಿ ವಲಯ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮ...

· 1 ನಿಮಿಷ ಓದು· ಉಡುಪಿ
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯಕ್ರಮ.
ಹಂಚಿಕೊಳ್ಳಿ:

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ ಎಸ್ ಎಸ್ ಸ್ವಯಂಸೇವಕರು, 72ನೇ ವನ್ಯಜೀವ ಸಪ್ತಾಹದ ಅಂಗವಾಗಿ ಸೋಮೇಶ್ವರ ವನ್ಯಜೀವಿ ವಲಯ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಲಯ ಅಧಿಕಾರಿ ಮಂಜುನಾಥ ಗಾಣಿಗ ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವದ ಕುರಿತು ಅರಿವು ಮೂಡಿಸುತ್ತಾ, ಪ್ಲಾಸ್ಟಿಕ್ ತ್ಯಾಜ್ಯಗಳು ಜಲಮೂಲಗಳಲ್ಲಿ ಸೇರುವುದರಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್ ಅವರು ಶುಭ ಹಾರೈಸಿದರು.

ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ ಶೆಟ್ಟಿ, ಸ್ವಯಂಸೇವಕರು ಹಾಗೂ ಸೋಮೇಶ್ವರ ವನ್ಯಜೀವಿ ವಲಯದ ಅರಣ್ಯ ಇಲಾಖೆಯ ಸಿಬ್ಬಂದಿ ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.

ಹಂಚಿಕೊಳ್ಳಿ: