ಹೆಬ್ರಿ ಶಾರದೋತ್ಸವ: 16ನೇ ವರ್ಷದ ಮಹೋತ್ಸವದ ಆಮಂತ್ರಣ ಪತ್ರಿಕೆಗೆ ಪೂಜೆ!
ಹೆಬ್ರಿ : ಹೆಬ್ರಿ ಸಾರ್ವಜನಿಕ ಶಾರದೋತ್ಸವ ಸಮಿತಿಯ ವತಿಯಿಂದ ನಡೆಯುವ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯ ಪೂಜಾ ಕಾರ್ಯಕ್ರಮ ಹೆಬ್ರಿಯ ಗ್ರಾಮದೊಡೆಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ...

ಹೆಬ್ರಿ: ಹೆಬ್ರಿ ಸಾರ್ವಜನಿಕ ಶಾರದೋತ್ಸವ ಸಮಿತಿಯ ಆಶ್ರಯದಲ್ಲಿ ಜರುಗಲಿರುವ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯ ಪೂಜಾ ವಿಧಿವಿಧಾನಗಳು ಹೆಬ್ರಿಯ ಗ್ರಾಮದೊಡೆಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಜರುಗಿದವು.
ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯ ಪೂಜಾರಿ ಚಾರಾ, ಕೋಶಾಧಿಕಾರಿ ರಾಘವೇಂದ್ರ ನಾಯ್ಕ್, ಗೌರವ ಸಲಹೆಗಾರರಾದ ವಾದಿರಾಜ್ ಶೆಟ್ಟಿ, ಹರೀಶ್ ಪೂಜಾರಿ, ಸೀತಾನದಿ ವಿಠ್ಠಲ್ ಶೆಟ್ಟಿ, ಸಮಿತಿಯ ಪದಾಧಿಕಾರಿಗಳಾದ ಸುರೇಶ್ ಶೆಟ್ಟಿ, ಸುಕೇಶ್ ಶೆಟ್ಟಿ, ಕೃಷ್ಣ ನಾಯ್ಕ್, ಟಿ.ಜಿ. ಆಚಾರ್ಯ, ರಮೇಶ್ ಶೆಟ್ಟಿ, ಮಹೇಶ್ ಹೆಗ್ಡೆ, ಅಜೋಳ್ಳಿ ಹರೀಶ್ ಶೆಟ್ಟಿ, ನಡಪಾಲು ಪ್ರಮೀಳಾ ಶೆಟ್ಟಿ, ಶಕುಂತಲಾ ಆರ್. ಬಲ್ಲಾಳ್ ಹಾಗೂ ಸೋನಿ ಪಿ. ಶೆಟ್ಟಿ ಮತ್ತು ಸಮಿತಿಯ ಸದಸ್ಯರು ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಸ್ಥಿತರಿದ್ದರು.




