ಸಂಕೇಶ್ವರ: KSRTC ಬಸ್ ಅಪಘಾತ, ಚಾಲಕ ಸಾವು, 12 ಪ್ರಯಾಣಿಕರಿಗೆ ಗಾಯ
ಚಿಕ್ಕೋಡಿ: ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬ...

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ, ಟಿಪ್ಪರ್‌ಗೆ KSRTC Bus ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.
ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಮೃತಪಟ್ಟಿದ್ದಾರೆ. ಮೃತ ಚಾಲಕ ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಗಂಗಾವತಿಯಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಸಂಚರಿಸುತ್ತಿದ್ದ ಬಸ್, ಸಂಕೇಶ್ವರದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹೋಗುತ್ತಿದ್ದಾಗ ಟಿಪ್ಪರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ಸಂಕೇಶ್ವರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಲವು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಬಸ್ ಗಂಗಾವತಿ–ಕೊಲ್ಲಾಪುರ ಮಾರ್ಗದಲ್ಲಿ ಓಡುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.




