ರಾಜ್ಯದ ಜನರಿಗೆ ಬಿಗ್ ಶಾಕ್- ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಂಪುಟ ಅಸ್ತು!
ಬೆಂಗಳೂರು: ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ಲೀಟರ್ ಹಾಲಿನ ದರ... The post ರಾಜ್ಯದ ಜನತೆಗೆ ಮತ್ತೊಂದು ಶಾಕ್- ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತ...

ಬೆಂಗಳೂರು: ದಸರಾ ಹಬ್ಬಕ್ಕೂ ಮುನ್ನವೇ ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಿದೆ. ಪ್ರತಿ ಲೀಟರ್ ಹಾಲಿನ ಬೆಲೆಯನ್ನು 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಬೇಡಿಕೆ ಸಲ್ಲಿಸಿದ್ದವು. ಈ ಪೈಕಿ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಸಕ್ತಿ ತೋರಿದ್ದು, ಸಚಿವ ಸಂಪುಟ ಸಭೆಯಲ್ಲಿಯೂ ಈ ದರ ಹೆಚ್ಚಳಕ್ಕೆ ಒಪ್ಪಿಗೆ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಾಲಿನ ದರ ಏರಿಕೆಯ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 27ರ ನಂತರ ಹಾಲಿನ ದರದಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ.




