ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್: ಕಂಚಿನ ಪದಕ ಗೆದ್ದ ನಿಟ್ಟೆಯ ವಿದ್ಯಾರ್ಥಿ ಜಗದೀಶ ಯಲ್ಲಪ್ಪ ತಳವಾರ
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ (ಪಿಯು) ಕಾಲೇಜುಗಳ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾ...

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಇತ್ತೀಚೆಗೆ ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪದವಿಪೂರ್ವ (ಪಿಯು) ಕಾಲೇಜುಗಳ ವೇಟ್ಲಿಫ್ಟಿಂಗ್ ಕ್ರೀಡಾಕೂಟದಲ್ಲಿ, ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಜಗದೀಶ ಯಲ್ಲಪ್ಪ ತಳವಾರ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಈ ರಾಜ್ಯ ಮಟ್ಟದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.




