ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ ಅನುದಾನ ಬಿಡುಗಡೆ ಮಾಡಿದೆ; ಶಿರ್ಲಾಲು ಗ್ರಾಮದ ಹಾರಾಡಿ ಬಳಿಯ ಸೇತುವೆ ನಿರ್ಮಾಣಕ್ಕೆ ಈ ಹಣ
ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾರಾಡಿ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿರುತ್ತದೆ.
· 1 ನಿಮಿಷ ಓದು· ಉಡುಪಿ

ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿ ಅನುದಾನವನ್ನು ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹಾಗೂ ಈ ಅನುದಾನ ಮಂಜೂರಾತಿಗೆ ಸಹಕರಿಸಿದ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅರುಣ್ ಪ್ರಸಾದ್ ಜೈನ್ ಅವರು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.




