ಧಾರವಾಡ: ಸ್ವಿಫ್ಟ್ ಕಾರು-ಕ್ಯಾಂಟರ್ ಅಪಘಾತ, ನಾಲ್ವರು ಸಾವು
ಧಾರವಾಡ: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಸ್ವಿಫ್ಟ್ ಕಾರು, ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅಜೀತ್, ರಾಕೇಶ್, ಸಂದೀಪ್, ಮತ್ತು ಶೃತಿ ಮೃತ ದುರ್ದೈವಿಗಳು. ಹುಬ್...

ಧಾರವಾಡ: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಸಮೀಪ ಸ್ವಿಫ್ಟ್ ಕಾರು ಹಾಗೂ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಅಜೀತ್, ರಾಕೇಶ್, ಸಂದೀಪ್, ಮತ್ತು ಶೃತಿ ಮೃತ ದುರ್ದೈವಿಗಳು. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಕಾರು ಕ್ಯಾಂಟರ್‌ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತಪಟ್ಟಿರುವವರೆಲ್ಲರೂ ವಿಜಯಪುರ ಜಿಲ್ಲೆಯ ನಿವಾಸಿಗಳೆಂದು ತಿಳಿದುಬಂದಿದೆ. ಮೃತದೇಹಗಳನ್ನು ನವಲಗುಂದ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ.




