ವಾಲಿಬಾಲ್ ಪಂದ್ಯಾವಳಿ: ಮೈಸೂರು ವಿಭಾಗಕ್ಕೆ ಆಯ್ಕೆಯಾದ ಹೆಬ್ರಿ ಪಿಆರ್ ಎನ್ ಅಮೃತಭಾರತಿ ವಿದ್ಯಾಲಯ ವಿದ್ಯಾರ್ಥಿಗಳು!
ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ, ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 17...

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ, ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ, ಕಾರ್ಕಳ ತಾಲ್ಲೂಕಿನ ಪರವಾಗಿ ಕಣಕ್ಕಿಳಿದ ಹೆಬ್ರಿ ಪಿಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಮೈಸೂರು ವಿಭಾಗ ಮಟ್ಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
10ನೇ ತರಗತಿಯ ನಿತೀಶ್ ಅವರು ಬೆಸ್ಟ್ ಅಟ್ಯಾಕರ್ ಮತ್ತು 10ನೇ ತರಗತಿಯ ಪ್ರಥಮ್ ಅವರು ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ವೈಯಕ್ತಿಕವಾಗಿ ತಮ್ಮದಾಗಿಸಿಕೊಂಡಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಅವರನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದನೆ ಸಲ್ಲಿಸಿದ್ದಾರೆ.




