ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ಸುದ್ದಿ

ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

– ಮುಂದಿನ ವಿಚಾರಣೆಗೆ 3 ದಿನಗಳ ಮುನ್ನ ಅಫಿಡವಿಟ್‌ಗೆ ಸುಪ್ರೀಂ ಸೂಚನೆ ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಜ...

· ಧಾರವಾಡ
ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ
ಹಂಚಿಕೊಳ್ಳಿ:

– ಮುಂದಿನ ವಿಚಾರಣೆಗೆ 3 ದಿನಗಳ ಮುನ್ನ ಅಫಿಡವಿಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ್ದು, ಅಫಿಡವಿಟ್ ಸಲ್ಲಿಕೆಗೆ ಸೂಚನೆ ನೀಡಿದೆ.

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಅಕ್ಟೋಬರ್ 27 ಕ್ಕೆ ವಿಚಾರಣೆ ಮುಂದೂಡಿದೆ. ಯಾವುದೇ ಮಧ್ಯಂತರ ಆದೇಶ ನೀಡದೇ ವಿಚಾರಣೆ ಮುಂದೂಡಿದ ಹಿನ್ನೆಲೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಹೈಕೋರ್ಟ್ ನೀಡಿದ ಜಾಮೀನು ರದ್ದು ಮಾಡಬೇಕು ಎಂದು ಕೋರಿ ಸಿಬಿಐ ಮತ್ತು ಗುರುನಾಥಗೌಡ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಿಚಾರಣೆ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲರು, ವಿನಯ್ ಕುಲಕರ್ಣಿ ಅವರಿಗೆ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿತ್ತು. ಸಾಕ್ಷ್ಯಗಳ ಮೇಲೆ ಪರಿಣಾಮ ಬೀರಿದ ಕಾರಣ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅದರ ವಿಚಾರಣೆ ಕೂಡಾ ನಡೆಯುತ್ತಿದೆ. ಈ ಹಿನ್ನೆಲೆ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ರದ್ದು ಮಾಡಬೇಕು ಎಂದು ಮನವಿ ಮಾಡಿದರು.

ಎರಡನೇ ಕೇಸ್‌ನಲ್ಲಿ ಜಾಮೀನು ಸಿಕ್ಕಿದ್ಯಾ ಎಂದು ಕೋರ್ಟ್ ಕೇಳಿತು. ಜಾಮೀನು ಸಿಕ್ಕಿದೆ ಎಂದು ಸರ್ಕಾರಿ ವಕೀಲರು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ವಿನಯ್ ಕುಲಕರ್ಣಿ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಎರಡು ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆ ನಡೆಸಿ, ಅದಕ್ಕೆ ಸ್ವಲ್ಪ ಕಾಲಾವಾಕಾಶ ಕೊಡಬೇಕು ಎಂದು ಮನವಿ ಮಾಡಿದರು. ಅಲ್ಲದೇ ಇತರೆ ಆರೋಪಿಗಳು ಅರ್ಜಿ ಸಲ್ಲಿಸಿದ್ದ ಇದರೊಟ್ಟಿಗೆ ಸೇರಿಸಿ ವಿಚಾರಣೆ ನಡೆಸಿ ಎಂದು ಮನವಿ ಮಾಡಿದರು.

ಈ ವೇಳೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ವಿಚಾರಣೆ ಮುಂದುವರಿಸಿ ಎಂದು ಸರ್ಕಾರಿ ವಕೀಲರು ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಸುಪ್ರೀಂ ಕೋರ್ಟ್ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಲು ನಿರ್ಧರಿಸಿತು. ಅಕ್ಟೋಬರ್ 27 ಮುಂದಿನ ವಿಚಾರಣೆಗೆ ದಿನಾಂಕ ನಿಗದಿ ಮಾಡಿತು. ಇದಕ್ಕೂ ಮುನ್ನ ಮೂರು ದಿನಗಳ ಮುನ್ನ ಅಫಿಡವಿಟ್ ಸಲ್ಲಿಸಬೇಕು ಎಂದು ಕೋರ್ಟ್ ಸೂಚನೆ ನೀಡಿತು.

ಹೀಗಾಗಿ, ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆಯಾಗಿರುವ ಇನ್ಸ್ಪೆಕ್ಟರ್ ಚನ್ನಕೇಶವ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀ ಕೋರ್ಟ್ ಒಟ್ಟಾಗಿ ವಿಚಾರಣೆ ನಡೆಸಲಿದೆ.

ಹಂಚಿಕೊಳ್ಳಿ: