ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ರಾಜಕೀಯ

ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ ರಾಹುಲ್ ಗಾಂಧಿ: ಹೆಚ್‌.ಡಿ. ಕುಮಾರಸ್ವಾಮಿ ಟೀಕೆ!

ಮುಳಬಾಗಿಲು (ಕೋಲಾರ): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ‘ಮತಗಳ ಕಳ್ಳತನ’ದ ಆರೋಪವನ್ನು ಮುಂದಿಟ್ಟುಕೊಂಡು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂ...

· 2 ನಿಮಿಷ ಓದು· ಕೋಲಾರ
‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
ಹಂಚಿಕೊಳ್ಳಿ:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ‘ಮತಗಳ ಕಳ್ಳತನ’ದ ಆರೋಪ ಮಾಡುವ ಮೂಲಕ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಮುಳಬಾಗಿಲಿನಲ್ಲಿ ಮಂಗಳವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆ ಆರಂಭಗೊಂಡ ಬಳಿಕ ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಸುಮಾರು 90 ಸಾವಿರ ಮತದಾರರ ಹೆಸರುಗಳನ್ನು ಕೈಬಿಡುವಂತೆ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಹೇಳಲಾಗುತ್ತಿದೆಯಾದರೂ, ಅವುಗಳ ಪರಿಶೀಲನೆ ಹಾಗೂ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ. ಹೀಗಿರುವಾಗ ಮುಖ್ಯಮಂತ್ರಿ ಬಳಿ ಇರುವ ಮಾಹಿತಿ ಏನು? ಯಾವ ಆಧಾರದ ಮೇಲೆ ನವದೆಹಲಿಯ ಚುನಾವಣಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಪ್ರಶ್ನಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆ ಹಾಸನ ಜಿಲ್ಲೆಯನ್ನು ದಾಟಿ ಮುಂದೆ ಸಾಗಿಲ್ಲ. 10 ಟಿಎಂಸಿ ಅಡಿ ನೀರು ತರುವುದಾಗಿ ಭರವಸೆ ನೀಡಿದ್ದವರು ಈಗ ಅದನ್ನು 2 ಟಿಎಂಸಿ ಅಡಿಗೆ ಇಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ‘ಮುಂದಿನ ವರ್ಷ’ ಎಂದು ಹೇಳುತ್ತಾ ಯೋಜನೆಯನ್ನು ಮುಂದೂಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಮಾಡಿರುವ ಸಾಧನೆಗಳನ್ನು ಜನರ ಮುಂದೆ ಇಡಬೇಕು. ‘ಸಧೃಢ ಸಂಕಲ್ಪ’ದಂತಹ ಯೋಜನೆಗಳನ್ನು ಘೋಷಿಸಿದ್ದರೂ, ಅವುಗಳಿಗೆ ಬೇಕಾದ ಅನುದಾನ ಮೀಸಲಿಡಲಾಗಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದರು.

ಶೋಭಾ ಅಪಾರ್ಟ್‌ಮೆಂಟ್‌ಗೂ ಡಿಕೆಶಿಗೂ ಏನು ಸಂಬಂಧ? ಶಿಶುಪಾಲನ ಕಥೆಯಂತಾಯಿತು ಎಂದು ಎಚ್‌.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದೇ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿಯೂ ಅವರು ವಾಗ್ದಾಳಿ ನಡೆಸಿದರು. ‘ಗೃಹಲಕ್ಷ್ಮಿ’ ಯೋಜನೆಯ ಸ್ಥಿತಿ ಏನಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಈಗ ಸರ್ಕಾರ ಹಾಲಿನ ದರ ಹೆಚ್ಚಿಸುವ ಅನಿವಾರ್ಯತೆಗೂ ಸಿಲುಕಿದೆ ಎಂದು ಅವರು ಹೇಳಿದರು.

ರೈತರಿಗೆ ನೀಡಬೇಕಾದ ಪರಿಹಾರ ಕ್ರಮಗಳನ್ನು ಸರ್ಕಾರ ಸರಿಯಾಗಿ ನಿರ್ವಹಿಸಬೇಕು. ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಕಾರಣಕ್ಕೆ ಬರ ಘೋಷಣೆ ಮಾಡುವಂತಹ ಸ್ಥಿತಿ ಉಂಟಾಗಬಾರದು ಎಂದು ಅವರು ನುಡಿದರು.

ಮುಖ್ಯಮಂತ್ರಿ ಹಾಗೂ ಶಾಸಕರು ಪಕ್ಷದ ಹೈಕಮಾಂಡ್‌ನಿಂದ ಸೂಚನೆ ಪಡೆಯಲು ದೆಹಲಿ ಪ್ರವಾಸದಲ್ಲೇ ಅತಿಯಾದ ಸಮಯವನ್ನು ಕಳೆಯುತ್ತಿದ್ದಾರೆ. ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆಯೂ ಜನರಿಗೆ ತಿಳಿದಿದೆ ಎಂದು ಅವರು ಹೇಳಿದರು.

ಹಂಚಿಕೊಳ್ಳಿ: