ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ರಾಜಕೀಯ

ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರ ಹಣಕಾಸು ನಿಭಾಯಿಸುವಲ್ಲಿ ಎಡವಿದ್ದಕ್ಕೆ ಕರ್ನಾಟಕದ ಜನ ಏಕೆ ದಂಡ ತೆರಬೇಕು..?

ಬೆಂಗಳೂರು: ಜನರ ಜೇಬಿಗೆ ಮತ್ತೊಂದು ಹೊಡೆತ ನೀಡಲು ರಾಜ್ಯದ ಕಾಂಗ್ರೆಸ್ ಸರ್ಕಾರ ಸಜ್ಜಾಗಿದ್ದು, ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು ಎಂದು ಮುಖ್ಯಮಂತ್ರಿ ಡಿಕೆ.ಶಿವಕು...

· ಬೆಂಗಳೂರು ನಗರ
ಮುಖ್ಯಮಂತ್ರಿಗಳೇ ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು..?
ಹಂಚಿಕೊಳ್ಳಿ:

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರ ಜೇಬಿಗೆ ಮತ್ತೊಂದು ಬರೆ ಎಳೆಯಲು ಸಿದ್ಧತೆ ನಡೆಸಿದ್ದು, ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನತೆ ಏಕೆ ದಂಡ ತೆರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಈ ವಿಷಯವಾಗಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಆರ್ಥಿಕ ನಿರ್ವಹಣೆಯ ಸೋಲಿನ ಹೊರೆಯನ್ನು ಒಂದೊಂದಾಗಿ ಜನರ ಮೇಲೆ ಹೇರಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8ರಷ್ಟು ಹೆಚ್ಚಳ ಮಾಡಲು ಸಚಿವ ಸಂಪುಟವು ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ಬಿಎಂಟಿಸಿ ಒಳಗೊಂಡಂತೆ ರಾಜ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.10ರಿಂದ 13ರಷ್ಟು ಏರಿಕೆ ಮಾಡಲು ತಯಾರಿ ನಡೆಸಲಾಗುತ್ತಿದೆ. ಈಗಾಗಲೇ ವಿವಿಧ ರೀತಿಯ ಆರ್ಥಿಕ ಸಂಕಷ್ಟಗಳನ್ನು ಅನುಭವಿಸುತ್ತಿರುವ ಜನತೆಯ ಮೇಲೆ ಮತ್ತಷ್ಟು ಹೊರೆ ಹೊರಿಸುವುದು ಎಷ್ಟು ಸಮಂಜಸ ಎಂದು ಅವರು ಪ್ರಶ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ, ವಿದ್ಯುತ್ ದರ ಏರಿಕೆ, ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಆಸ್ತಿ ನೋಂದಣಿ ಶುಲ್ಕ ದ್ವಿಗುಣ, ನೀರು ಮತ್ತು ತ್ಯಾಜ್ಯ ನಿರ್ವಹಣೆ ಶುಲ್ಕಗಳ ಏರಿಕೆ ಹಾಗೂ ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಅನೇಕ ಕ್ರಮಗಳನ್ನು ಅವರು ಪ್ರಸ್ತಾಪಿಸಿದ್ದಾರೆ.

ಒಂದು ಕಡೆ ಗ್ಯಾರಂಟಿಗಳ ನೆಪದಲ್ಲಿ ಜನರಿಗೆ ಹಣ ನೀಡುತ್ತಿದ್ದರೆ, ಇನ್ನೊಂದು ಕಡೆ ತೆರಿಗೆ ಮತ್ತು ಬೆಲೆ ಏರಿಕೆಯ ಮೂಲಕ ಜನರ ಜೇಬಿನಿಂದಲೇ ದುಪ್ಪಟ್ಟು ಹಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರ ವಾಪಸ್ ಪಡೆಯುತ್ತಿದೆ.

ಹಾಲು ಖರೀದಿಸುವ ಕುಟುಂಬದಿಂದ ಆರಂಭಿಸಿ ಪ್ರತಿನಿತ್ಯ ಬಸ್‌ನಲ್ಲಿ ಓಡಾಡುವ ಕಾರ್ಮಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಮಧ್ಯಮ ವರ್ಗದ ಕುಟುಂಬಗಳವರೆಗೆ ಈ ಬೆಲೆ ಏರಿಕೆಯ ಬಿಸಿ ನೇರವಾಗಿ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ.

ಜನರ ಜೀವನವನ್ನು ಸುಲಭವಾಗಿಸಬೇಕಾದ ಸರ್ಕಾರ ತನ್ನ ವೈಫಲ್ಯದ ಹೊರೆಯನ್ನು ಪ್ರಜೆಗಳ ಮೇಲೆಯೇ ವರ್ಗಾಯಿಸುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

ಹಂಚಿಕೊಳ್ಳಿ: